ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೆ.ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡವನ್ನು ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ. ಅಲ್ಲದೇ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಐಪಿಸಿ ಸೆಕ್ಷನ್ 376(2) (ಕೆ) ರಡಿ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡವನ್ನು ವಿಧಿಸಲಾಗಿದೆ.
376 (2)(ಎನ್) ಪದೇ ಪದೇ ಅತ್ಯಾಚಾರ, ಜೀವನ ಪರ್ಯಂತ ಸೆರೆವಾಸದ ಶಿಕ್ಷೆಯನ್ನು ವಿಧಿಸಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅತ್ಯಾಚಾರದ 2 ಸೆಕ್ಷನ್ ಗಳಲ್ಲಿ ಪ್ರಜ್ವಲ್ ರೇವಣ್ಣಗೆ ಒಟ್ಟು 10 ಲಕ್ಷ ದಂಡ ವಿಧಿಸಲಾಗಿದೆ. ದಂಡದ ಹಣದಲ್ಲಿ ಪ್ರಕರಣದ ಸಂತ್ರಸ್ತೆಗೆ 7 ಲಕ್ಷ ರೂ ನೀಡಬೇಕು ಎಂದಿದೆ.
ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭಗೊಳ್ಳಲಿದೆ. ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ. ಏಕೆಂದರೇ ಈ ಪ್ರರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಿಲಿಲ್ಲ. ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲಾಗಿತ್ತು. ಅಪರಾಧಿಗೆ ತೀರ್ಪಿನ ಪ್ರತಿ ಉಚಿತವಾಗಿ ನೀಡಲು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಸೀಲ್ ಹಾಕಿದ ಬಳಿಕ ಉಚಿತ ಕಾಪಿ ಒದಗಿಸಲು ಸೂಚಿಸಲಾಗಿದೆ.




