ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ | ODI series

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು(ODI series) 3-2 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ, ಇದೀಗ ಕಿವೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದೆ. ನವೆಂಬರ್ 4 ರಿಂದ 15 ರವರೆಗೆ ನಡೆಯಲಿರುವ ಈ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಟ್ಟು 19 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.

ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ನಿಯಮಿತ ನಾಯಕ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ. ಗಿಲ್ ಗೈರುಹಾಜರಿಯಲ್ಲಿ ಕೊನೆಯ ಎರಡು ಪಂದ್ಯಗಳಿಗೆ ಟಿ20 ಸರಣಿ ಗೆಲ್ಲಿಸಿಕೊಟ್ಟ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಯ್ಯರ್ ಅವರಿಗೆ ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಚೊಚ್ಚಲ ಅವಕಾಶ ಇದಾಗಿದೆ.

ತಂಡಕ್ಕೆ ಮರಳಿದ ಅನುಭವಿಗಳು (IN):

ಏಕದಿನ ಸರಣಿಗಾಗಿ( ODI Series Against New Zealand) ಒಟ್ಟು 10 ಆಟಗಾರರನ್ನು ಹೊಸದಾಗಿ ಸೇರಿಸಿಕೊಳ್ಳಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಋತುರಾಜ್ ಗಾಯಕ್ವಾಡ್, ಗುರ್ನೂರ್ ಬ್ರಾರ್ ಹಾಗೂ ಆಕಿಬ್ ನಬಿ ಐದೂ ಪಂದ್ಯಗಳಿಗೂ ಲಭ್ಯವಿರಲಿದ್ದಾರೆ. ಶುಭಮನ್ ಗಿಲ್, ಕೆ.ಎಲ್. ರಾಹುಲ್ ಮತ್ತು ಅಂಶುಲ್ ಕಾಂಬೋಜ್ ಮೊದಲ ಮೂರು ಪಂದ್ಯಗಳಿಗೆ ಮಾತ್ರ ಆಯ್ಕೆಯಾಗಿದ್ದರೆ, ಯಶ್ ಠಾಕೂರ್ ಕೊನೆಯ ಎರಡು ಪಂದ್ಯಗಳಿಗೆ ತಂಡ ಕೂಡಿಕೊಳ್ಳಲಿದ್ದಾರೆ.

ಸ್ವದೇಶಕ್ಕೆ ಮರಳಲಿರುವ ಆಟಗಾರರು (OUT):

ಟಿ20 ತಂಡದಲ್ಲಿದ್ದ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಭುವನೇಶ್ವರ್ ಕುಮಾರ್, ಶಿವಂ ದುಬೆ, ವರುಣ್ ಚಕ್ರವರ್ತಿ, ಮಯಾಂಕ್ ಯಾದವ್, ಪ್ರಿನ್ಸ್ ಯಾದವ್ ಹಾಗೂ ವೈಭವ್ ಸೂರ್ಯವಂಶಿ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದು, ಭಾರತಕ್ಕೆ ವಾಪಸಾಗಲಿದ್ದಾರೆ.

ಉಭಯ ತಂಡಗಳಲ್ಲಿ ಸ್ಥಾನ ಪಡೆದವರು:

ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ನಮನ್ ಧೀರ್ ಎರಡೂ ಮಾದರಿಯ ತಂಡಗಳಲ್ಲಿ ಉಳಿದುಕೊಂಡಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಮೊದಲ ಪಂದ್ಯಕ್ಕೆ ಮಾತ್ರ ಆಯ್ಕೆಯಾಗಿದ್ದರೆ, ತಿಲಕ್ ವರ್ಮಾ ಮತ್ತು ಕುಮಾರ್ ಕುಶಾಗ್ರ ಕೊನೆಯ ಎರಡು ಪಂದ್ಯಗಳಲ್ಲಿ ತಂಡದಲ್ಲಿರಲಿದ್ದಾರೆ.

ಭಾರತದ ಸಂಪೂರ್ಣ ಏಕದಿನ ತಂಡ

  • ಐದೂ ಪಂದ್ಯಗಳಿಗೆ ಲಭ್ಯವಿರುವ ಆಟಗಾರರು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್, ನಮನ್ ಧೀರ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಆಕಿಬ್ ನಬಿ.

  • ಮೊದಲ 3 ಪಂದ್ಯಗಳಿಗೆ ಮಾತ್ರ: ಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಅಂಶುಲ್ ಕಾಂಬೋಜ್.

  • ಮೊದಲ ಪಂದ್ಯಕ್ಕೆ ಮಾತ್ರ: ನಿತೀಶ್ ಕುಮಾರ್ ರೆಡ್ಡಿ.

  • ಕೊನೆಯ 2 ಪಂದ್ಯಗಳಿಗೆ ಮಾತ್ರ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಯಶ್ ಠಾಕೂರ್.