ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಬಳಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, 2025 ರ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಬಳಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, 2025 ರ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ… pic.twitter.com/vEoJHYcsGW
— DIPR Karnataka (@KarnatakaVarthe) December 17, 2024




