ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

ಬೆಂಗಳೂರು: ಮತಗಳ್ಳತನ ಆರೋಪದ ಬಗ್ಗೆ ರಾಹುಲ್ ಗಾಂಧಿ ವಿರುದ್ಧವೇ ಹೇಳಿಕೆ ನೀಡಿದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಸಚಿವ ಕೆ.ಎನ್ ರಾಜಣ್ಣ ಮೇಲೆ ಗರಂ ಆಗಿತ್ತು. ಹೀಗಾಗಿ ಕೂಡಲೇ ರಾಜೀನಾಮೆ ನೀಡುವಂತೆಯೂ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿರುವಂತ ಕೆ.ಎನ್ ರಾಜಣ್ಣ ಅವರು, ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕೆ.ಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ನೀಡಿದ್ದಂತ ರಾಜೀನಾಮೆ ಪತ್ರವನ್ನು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರಿಗೆ ರವಾನಿಸಿದ್ದರು.

ಸಿಎಂ ಸಿದ್ಧರಾಮಯ್ಯ ರವಾನಿಸಿದ್ದಂತ ಕೆ.ಎನ್ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನಗೊಂಡಂತೆ ಆಗಿದೆ.