ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಶೇ.74ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದುವ ಮೂಲಕ ಮೇಲುಗೈ ಸಾಧಿಸಿದ್ದಾರೆ.
2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 21-03-2025ರಿಂದ 04-04-2025ರವರೆಗೆ ಒಟ್ಟು 2818 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. ಈ ಪರೀಕ್ಷೆಗೆ ಒಟ್ಟು 8,42,173 ವಿದ್ಯಾರ್ಥಿಗಳು ಹಾಜರಾಗಿದ್ದರು.
ದಿನಾಂಕ 15-04-2025ರಿಂದ 26-04-2025ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 237 ಮೌಲ್ಯಮಾಪನ ಕೇಂದ್ರಗಳಲ್ಲಿ 60,943 ಮೌಲ್ಯಮಾಪಕರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಮೌಲ್ಯಮಾಪನವನ್ನು ನಡೆಸಲಾಗಿತ್ತು.
ಇಂತಹ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 02-05-2025ರ ಇಂದು ಮಧ್ಯಾಹ್ನ 12.30ಕ್ಕೆ https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದಂತ 3,90,311 ವಿದ್ಯಾರ್ಥಿಗಳಲ್ಲಿ 2,26,637 ಮಂದಿ ತೇರ್ಗಡೆಯಾಗಿದ್ದಾರೆ. 4,00,579 ವಿದ್ಯಾರ್ಥಿನಿಯರಲ್ಲಿ 2,96,438 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ.
ಇನ್ನೂ 27,795 ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗಿದ್ದರು. ಇವರಲ್ಲಿ 25,326 ಮಂದಿ ಉತ್ತೀರ್ಣರಾಗುವ ಮೂಲಕ ಮೊದಲ ಸ್ಥಾನವನ್ನು ಪಡೆದಿದೆ. 39,257 ವಿದ್ಯಾರ್ಥಿಗಳು ಕಲಬುರ್ಗಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗಿದ್ದರು. ಇವರಲ್ಲಿ 16,658 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.



