ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 9 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಸಾಗರದ ಉಪ ವಿಭಾಗಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ವೀರೇಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಆಡಳಿತ ಸೇವೆಗೆ ಸೇರಿದಂತ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ.
ಕೆಎಎಸ್ ಅಧಿಕಾರಿ ವಿಶ್ವನಾಥ ಪಿ ಹೀರೇಮಠ ಅವರನ್ನು ಕೆ ಎಸ್ ಐ ಐ ಡಿಸಿಯ ಕಾರ್ಯಕಾರಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಸುರೇಶ್ ಕುಮಾರ್ ಕೆಎಂ ಅವರನ್ನು ಬೆಂಗಳೂರಿನ ಅಬಕಾರಿ ಇಲಾಖೆಯ ಅಪರ ಆಯುಕ್ತರನ್ನಾಗಿ ನೇಮಿಸಿದೆ.
ಅನಿತಾ ಸಿ ಅವರನ್ನು ಕಿಯೋನಿಕ್ಸ್ ನಿರ್ದೇಶಕರನ್ನಾಗಿ, ಪರಶುರಾಮ ಶಿನ್ನಾಳಕರ್ ಅವರನ್ನು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ.
ದಾವಣಗೆರೆ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ವಿರೇಶ್ ಕುಮಾರ್ ಅವರನ್ನು ಸಾಗರದ ಉಪ ವಿಭಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದೆ.





