ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (CAR/DAR) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸೆ.6ರಂದು ಲಿಖಿತ ಪರೀಕ್ಷೆ ನಡೆಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದೇ ದಿನದಲ್ಲಿ ಅದರ ಕೀ ಉತ್ತರಗಳನ್ನೂ ಪ್ರಕಟಿಸಿದೆ.
ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಕೆಇಎ ಪೋರ್ಟಲ್ ನಲ್ಲಿನ ಲಿಂಕ್ ಮೂಲಕ ಸಲ್ಲಿಸಬಹುದು. ಇದಕ್ಕೆ ಸೆ.9ರಂದು ಬೆಳಿಗ್ಗೆ 10.30ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು.
ಪೂರ್ಣ ಮಾಹಿತಿಯೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ ₹25 ಪಾವತಿಸಬೇಕು. ವಿಷಯ ತಜ್ಞರ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲಿಸಿ ಪ್ರಕಟಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದರು.




