ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಮಾಡಿದ ಆರೋಪಿ ಅರೆಸ್ಟ್

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ಟೌನ್ ಠಾಣೆಯ ಪೊಲೀಸರು ಬೆಂಗಳೂರಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ಕಾರ್ಕಳದ ಸಂಪತ್ ಸಾಲಿಯಾನ ಎಂಬುವವರನ್ನು ಬಂಧಿಸಿದ್ದಾರೆ.

ಸಂಪತ್ ಸಾಲಿಯಾನ ಅವರು ಸೋಷಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂಬುದಾಗಿ ಪೋಸ್ಟ್ ಒಂದಕ್ಕೆ ಕಾಮೆಂಟ್ ಹಾಕಿದ್ದರು. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು, ಇದೀಗ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.