ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 889 ಎಂಡಿಎಸ್ ಸೀಟು ಲಭ್ಯ ಇದ್ದು, ಮೊದಲ ಸುತ್ತಿನಲ್ಲಿ 636 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಒಟ್ಟು 1,400 ಮಂದಿ ಸೀಟು ಪಡೆಯಲು ಅರ್ಜಿ ಸಲ್ಲಿಸಿದ್ದರು. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ತಮಗೆ ಸೂಕ್ತ ಅನಿಸಿದರೆ ಛಾಯ್ಸ್ -1 ಅನ್ನು ಆಯ್ಕೆ ಮಾಡಿಕೊಂಡು ಕಾಲೇಜಿಗೆ ಪ್ರವೇಶ ಪಡೆಯಬಹುದು. ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
#PGNEET-2025, #MDS ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ಸೋಮವಾರ ಪ್ರಕಟಿಸಿದೆ. ವಿವರಗಳಿಗೆ #KEA ವೆಬ್ ಸೈಟ್ ನೋಡಬಹುದು.
ಒಟ್ಟು 889 ಎಂಡಿಎಸ್ ಸೀಟು ಲಭ್ಯ ಇದ್ದು, ಮೊದಲ ಸುತ್ತಿನಲ್ಲಿ 636 ಮಂದಿಗೆ ಸೀಟು ಹಂಚಿಕೆಯಾಗಿದೆ. ಒಟ್ಟು 1,400 ಮಂದಿ…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) July 14, 2025




