ವೈದ್ಯಕೀಯ: ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ

KEA

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.19ರಂದು ಬೆಳಿಗ್ಗೆ 7 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕೆಸೆಟ್: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-25 (ಕೆಸೆಟ್)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.24ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಸೆ.25ರೊಳಗೆ ಶುಲ್ಕ ಪಾವತಿಸಬೇಕು. ಇದು ಕೊನೆ ವಿಸ್ತರಣೆಯಾಗಿದ್ದು ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.