ಬೆಳಗಾವಿ: ಇಂದು ಮುಂಜಾನೆ 5ರ ಸುಮಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದಂತ ಕಾರು ಅಪಘಾತಗೊಂಡಿತ್ತು. ಈ ಅಪಘಾತದಲ್ಲಿ ಗಾಯಗೊಂಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಸಂಬಂಧ ಕಿತ್ತೂರು ಠಾಣೆಗೆ ತೆರಳಿ ಸಚಿವೆಯ ಅಂಗ ರಕ್ಷಕ ಈರಪ್ಪ ಹಣಶಿಕಟ್ಟಿ ಅವರು ದೂರು ನೀಡಿದ್ದರು. ಈ ದೂರು ಆಧರಿಸಿ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಕಿತ್ತೂರು ಠಾಣೆಯಲ್ಲಿ ಜೀವಕ್ಕೆ ಕುತ್ತು ತರುವುದು, ನಿಷ್ಕಾಳಜಿಯ ಚಾಲನೆ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.


