ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.3ರಷ್ಟು DA ಹೆಚ್ಚಳಕ್ಕೆ ಮೋದಿ ಸಂಪುಟ ಅನುಮೋದನೆ | DA hike

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕ್ರಮವಾಗಿ ತುಟ್ಟಿ ಭತ್ಯೆ (Dearness Allowance -DA) ಮತ್ತು ತುಟ್ಟಿ ಪರಿಹಾರ (ಡಿಆರ್) ಗಳಲ್ಲಿ ಶೇ. 3 ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

“ಜುಲೈ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರದಲ್ಲಿ ಶೇ. 3 ರಷ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ” ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.