ಅಂಡರ್-19 ಏಷ್ಯಾಕಪ್ ಗೆದ್ದ ಭಾರತ ಯುವಪಡೆಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: 2026ರ ಪುರುಷರ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಒಂದು ವಿಕೆಟ್‌ನ ರೋಚಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ಯುವ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಅಲ್ ಅಮೆರಾತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ್ದ 338 ರನ್‌ಗಳ ಬೃಹತ್ ಗುರಿಯನ್ನು ಭಾರತ 9 ವಿಕೆಟ್ ಕಳೆದುಕೊಂಡು 339 ರನ್ ಗಳಿಸುವ ಮೂಲಕ ಯಶಸ್ವಿಯಾಗಿ ಬೆನ್ನಟ್ಟಿತು. ಕೊನೆಯ ಓವರ್‌ವರೆಗೂ ನಡೆದ ರೋಚಕ ಹೋರಾಟದಲ್ಲಿ ಯುವ ಆಟಗಾರರು ಗೆಲುವು ದಾಖಲಿಸಿದರು.

ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ತಮ್ಮ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್‌ಗೆ ಇದೊಂದು ಅದ್ಭುತ ದಿನವಾಗಿದ್ದು, 2026ರ ಅಂಡರ್-19 ಏಷ್ಯಾಕಪ್ ಪ್ರಶಸ್ತಿ ಗೆದ್ದ ಯುವ ಆಟಗಾರರ ಬಗ್ಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

ತಂಡದ ಈ ಸಾಧನೆ ದೇಶದ ಅನೇಕ ಯುವ ಕ್ರಿಕೆಟಿಗರಿಗೆ ಸ್ಫೂರ್ತಿಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಮೋದಿ, ಮುಂದಿನ ಪಂದ್ಯಗಳು ಮತ್ತು ಭವಿಷ್ಯದ ಪ್ರಯತ್ನಗಳಿಗೆ ಆಟಗಾರರಿಗೆ ಶುಭ ಹಾರೈಸಿದ್ದಾರೆ.