ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪತ್ನಿ ಪಾರ್ವತಿಗೆ ಸಂಕಷ್ಟ ಎದುರಾದಂತೆ ಆಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ( MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ವಜಾಗೊಳಿಸಿತ್ತು.
ಇದೀಗ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ವಜಾಗೊಳಿಸಿದ್ದಂತ ಅರ್ಜಿ ಸಂಬಂಧ ಹೈಕೋರ್ಟ್ ವಿಭಾಗೀಯ ನ್ಯಾಯಾಪೀಠಕ್ಕೆ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ.




