BREAKING: ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ಪತ್ನಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಮುಡಾದಿಂದ ಸಿಎಂ ಸಿದ್ಧರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆ ಪ್ರಕರಣ ಸಂಬಂಧ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಮತ್ತೊಂದು ಶಾಕ್ ನೀಡಿದೆ.

ಮುಡಾ ಹಗರಣ ಕುರಿತಂತೆ ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ಜಾರಿಯಾಗದ ಹಿನ್ನಲೆಯಲ್ಲಿ ಹೈಕೋರ್ಟ್ ಜಾರಿಗೊಳಿಸುವಂತೆ ಆದೇಶಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್, ಸಿಎಂ ಜೋಶಿ ಅವರಿದ್ದ ಪೀಠ ಆದೇಶಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ಮತ್ತೆ ನೋಟಿಸ್ ನೀಡಿದೆ. ಆ ಬಳಿಕ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.