ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ‘ನಂದಿನಿ ಹಾಲು’: ರೂ. ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಸಂಕ್ರಾಂತಿ ಬಳಿಕ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸುಳಿವನ್ನು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.

ಬುಧವಾರ ನಡೆದಂತ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ ದರ ಏರಿಕೆ ಮಾಡುವಂತೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ನಂದಿನಿ ಹಾಲಿನಲ್ಲಿ ಇನ್ನೂ 50 ಎಂಎಲ್ ಹೆಚ್ಚುವರಿ ನೀಡಿ, 2 ರೂ ಹೆಚ್ಚಳ ಮಾಡಲಾಗಿತ್ತು. ಈ ಹೆಚ್ಚುವರಿ ಹಾಲು ವಾಪಾಸ್ ನಿರ್ಧಾರ ಮಾಡಲಾಗಿದೆ ಎಂದರು.