ಬೆಂಗಳೂರು: ತಿಥಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ಗಡ್ಡಪ್ಪ ಗುರುತಿಸಿಕೊಂಡಿದ್ದವರು. ಈ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಕೂಡ ಲಭಿಸಿತ್ತು. ಇಂತಹ ಗಡ್ಡಪ್ಪ ಇನ್ನಿಲ್ಲವಾಗಿದ್ದಾರೆ.
ಗಡ್ಡಪ್ಪ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ
ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಜತೆಗೆ ‘ತರ್ಲೆ ವಿಲೇಜ್’, ‘ಜಾನಿ ಮೇರಾ ನಾಮ್’, ‘ಹಳ್ಳಿ ಪಂಚಾಯಿತಿ’ ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
ಜತೆಗೆ 'ತರ್ಲೆ ವಿಲೇಜ್', 'ಜಾನಿ ಮೇರಾ ನಾಮ್', 'ಹಳ್ಳಿ ಪಂಚಾಯಿತಿ' ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.… pic.twitter.com/G2WuMPeTx3
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 12, 2025



