ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆಯಾಗಿದೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಬಗ್ಗೆ ಕೇಂದ್ರ ಸರ್ಕಾರವು ಸಚಿವ ಸಂಪುಟದ ಅನುಮೋದನೆ ಪಡೆದು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.


ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಂಗಳವಾರ ಈ ಮಸೂದೆಯನ್ನು ಮಂಡಿಸಿದರು. ಈ ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆಯು ಸರ್ವಾಧಿಕಾರ ಹೇರುವ ಪ್ರಯತ್ನವಾಗಿದೆ ಎಂದು ಪ್ರತಿಪಕ್ಷಗಳು ಮೋದಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ.