ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಮಾ.5ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.
ಕೆಲವು ಅಭ್ಯರ್ಥಿಗಳು ಶುಲ್ಕ ಪಾವತಿಗೆ ಸಮಯ ಕೇಳಿದ್ದರಿಂದ ಈ ತೀರ್ಮಾನ ಮಾಡಿದ್ದು, ಸಂಜೆ 4ರೊಳಗೆ ಶುಲ್ಕ ಪಾವತಿಸಿ ಸಂಜೆ 5.30ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಈ ಅವಧಿ ನಂತರವೂ ಯಾರು ಶುಲ್ಕ ಪಾವತಿಸಿ, ಕಾಲೇಜಿಗೆ ಹೋಗಿ ಪ್ರವೇಶ ಪಡೆಯುವುದಿಲ್ಲವೊ ಅಂತಹವರ ಸೀಟುಗಳನ್ನು 4ನೇ ಸುತ್ತಿನ ಹಂಚಿಕೆಗೆ ಪರಿಗಣಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.




