ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ, ನಾಳೆ ಶಿಕ್ಷೆ ಘೋಷಣೆ | Prajwal Revanna

ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಜನತಾ ದಳ (ಜಾತ್ಯತೀತ) ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಈ ಪ್ರಕರಣದ ಸಂಬಂಧ ನಾಳೆ ತೀರ್ಪು ಪ್ರಕಟಿಸಲಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆ ಕೆಲಸದವಳ ಮೇಲೆ ಅತ್ಯಾಚಾರ ಸಂಬಂಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಎನ್ನುವಂತೆ ಆಗಿದೆ.

ಇನ್ನೂ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಪ್ರಕರಣದಲ್ಲಿ ಇಂದು ದೋಷಿ ಎಂಬುದಾಗಿ ತೀರ್ಪು ನೀಡಿರುವಂತ ಕೋರ್ಟ್, ನಾಳೆ ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.