ಪೂರ್ವ ಮುಂಗಾರು ಮಳೆ: ವಿದ್ಯುತ್ ಸುರಕ್ಷತಾ ಕ್ರಮಕ್ಕೆ ಬೆಸ್ಕಾಂ ಮನವಿ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆ ಕಳೆದೆರಡು ದಿನಗಳಿಂದ ಪ್ರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯುತ್‌ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ತುಂಡಾಗಿದ್ದರೆ , ವಾಲಿದ್ದರೆ , ಅಥವಾ ಮರಗಳ ಕೊಂಬೆಗಳು ವಿದ್ಯುತ್‌ ಕಂಬಗಳ ಮೇಲೆ ಬಿದ್ದಿದ್ದು ಕಂಡು ಬಂದಲ್ಲಿ ಅವುಗಳ ಸಮೀಪ ಹೋಗದೆ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಮಾಹಿತಿ ನೀಡಬೇಕು ಅಥವಾ ಬೆಸ್ಕಾಂ 1912 ಸಹಾಯವಾಣಿಗೆ ಕರೆ ಮಾಡಲು ಬೆಸ್ಕಾಂ ವಿನಂತಿಸಿದೆ.

ಪೂರ್ವ ಮುಂಗಾರಿನ ಭಾರೀ ಗಾಳಿ-ಮಳೆಗೆ ವಿದ್ಯುತ್‌ ವಾಹಕಗಳು ತುಂಡಾಗಿ ಬಿಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಗಾಳಿ -ಮಳೆ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿರುವ ಮರಗಳ ಕೆಳಗೆ ನಿಲ್ಲಬಾರದು ಹಾಗೂ ವಿದ್ಯುತ್ ಪರಿವರ್ತಕಗಳ ಬಳಿ ನಿಲ್ಲಬಾರದು ಎಂದು ಬೆಸ್ಕಾಂ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಗಾಳಿ-ಮಳೆ ಸಂದರ್ಭದಲ್ಲಿ ಕರೆಗಳ ಒತ್ತಡದಿಂದ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಕೆಲವೊಮ್ಮೆ ಲಭ್ಯವಾಗುವುದಿಲ್ಲ, ಹೀಗಾಗಿ ಬೆಸ್ಕಾಂ ವಾಟ್ಸ್ ಆಪ್ ಸಂಖ್ಯೆಗಳಿಗೆ ವಿದ್ಯುತ್ ಸಮಸ್ಯೆ ಕುರಿತ ಸಂದೇಶಗಳನ್ನು ಕಳುಹಿಸಲು ಬೆಸ್ಕಾಂ ಮನವಿ ಮಾಡಿದೆ.

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ವಾಟ್ಸ್ ಆಪ್ ಸಂಖ್ಯೆಗಳ ವಿವರ ಈ ಕೆಳಕಂಡಂತಿದೆ.

ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014,

ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021

ಗ್ರಾಹಕರು ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ. ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸ್ ಆ‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.