ಬೆಂಗಳೂರು: ಇನ್ಮುಂದೆ ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸುವಂತ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಇಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸುವಂತ ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ತರಲು ನಿರ್ಧರಿಸಲಾಗಿದೆ ಎಂದರು.
ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡಲು ಆಗಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮ ಮಾಡುವಂತಿಲ್ಲ. ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ ಎಂಬುದಾಗಿ ತಿಳಿಸಿದರು.



