ಬೆಂಗಳೂರು: ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (84) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.




