ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಿದ್ದು, ಮಂಗಳವಾರ ಕೀ ಉತ್ತರಗಳನ್ನು ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ಕೀ ಉತ್ತರಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ ಮಾರ್ಚ್ 7ರಂದು ಮಧ್ಯಾಹ್ನ 12ಗಂಟೆಯೊಳಗೆ (cetonline.karnataka.gov.in/kea/ ) ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ್ದ ಒಟ್ಟು 2.31 ಲಕ್ಷ ಮಂದಿ ಪೈಕಿ ಶೇ.98ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಭಾನುವಾರ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಯಿತು ಎಂದು ಅವರು ಹೇಳಿದ್ದಾರೆ.




