ಆ್ಯಸಿಡ್ ದಾಳಿಗೊಳಗಾದವರಿಗೆ ರೂ.2 ಲಕ್ಷ ಪರಿಹಾರ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು : ಆ್ಯಸಿಡ್ ದಾಳಿಗೊಳಗಾದವರಿಗೆ ಕಾರ್ಮಿಕ ಇಲಾಖೆ ವತಿಯಿಂದ ರೂ.2 ಲಕ್ಷ ಪರಿಹಾರ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ತಿಳಿಸಿದರು.

ಕಲಾಪದ ವೇಳೆ ವಿಧಾನ ಪರಿಷತ್‌ನಲ್ಲಿ ಸದಸ್ಯರಾದ ಕೆ ಶಿವಕುಮಾರ್ ಅವರು ಆ್ಯಸಿಡ್ ದಾಳಿ ಪ್ರಕರಣಗಳು ಹಾಗೂ ಆ್ಯಸಿಡ್ ಸಂತ್ರಸ್ತರ ಕುರಿತು ಪ್ರಸ್ತಾಪಿಸಿದ ವೇಳೆ ಸಚಿವರು ಮಾತನಾಡಿದರು.

ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ. ದಾಳಿ ಪ್ರಮಾಣ, ಸುಟ್ಟಿರುವುದರ ಆಧಾರದ ಮೇಲೆ ಪರಿಹಾರವನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ನೀಡಲಾಗುವುದು ಎಂದು ವಿವರಿಸಿದರು.