ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು.

ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ.

6 ಸಲ ಶಾಸಕರು ಹಾಗೂ ಒಂದು ಸಲ ಸಂಸದರಾಗಿಯೂ ಶಾಮನೂರು ಶಿವಶಂಕರಪ್ಪ ಆಯ್ಕೆಯಾಗಿದ್ದರು. 1997ರಲ್ಲಿ ರಾಜೀನಾಮೆ ನೀಡಿದ್ದಂತ ಅವರು, ದಾವಣಗೆರೆ ಸಂಸದರಾಗಿಯೂ ಆಯ್ಕೆಯಾಗಿದ್ದರು.

1999ರ ಲೋಕಸಭೆಯ ಮಧ್ಯಂತರ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಸೋಲು ಕಂಡಿದ್ದರು. ಐದು ದಶಕಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಬಾರಿ ಮಾತ್ರವೇ ಸೋಲು ಕಂಡಿದ್ದರು.

2004, 2008, 2013, 2018, 2023ರಲ್ಲಿ ಶಾಮನೂರು ಶಿವಶಂಕರಪ್ಪ ಅವರು ಶಾಸಕರಾಗಿ ಆಯ್ಕೆಯಾಗಿದ್ದರೇ, ಒಂದು ಬಾರಿ ಸಂಸದರಾಗಿದ್ದರು. 1994ರಲ್ಲಿ ಕಾಂಗ್ರೆಸ್ ನಿಂದ ದಾವಣಗೆರೆ ವಿಧಾನಸಭೆಗೆ ಟಿಕೆಟ್ ಪಡೆದು ಕಣಕ್ಕೆ ಇಳಿದಿದ್ದರು.