ನೈಋತ್ಯ ರೈಲ್ವೆಯಿಂದ ದೀಪಾವಳಿಗೆ ವಿಶೇಷ ರೈಲುಗಳ ಸಂಚಾರ

Charging points in trains to be switched off at night Strict directive from the Railway Department

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:

1. ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17, 2025 ರಂದು 16:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18, 2025 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ ದಿನ ರಾತ್ರಿ 23:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

2. ರೈಲು ಸಂಖ್ಯೆ 06229/06230 ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06229 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ಅಕ್ಟೋಬರ್ 19, 2025 ರಂದು 00:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ಎರಡೂ ವಿಶೇಷ ರೈಲುಗಳು (07353/07354 ಮತ್ತು 06229/06230) 20 ಬೋಗಿಗಳನ್ನು ಒಳಗೊಂಡಿರುತ್ತವೆ: ಅವುಗಳೆಂದರೆ: 01 ಫಸ್ಟ್ ಕಮ್ ಸೆಕೆಂಡ್ ಎಸಿ, 01 ಎಸಿ 2-ಟೈರ್, 02 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.

3. ರೈಲು ಸಂಖ್ಯೆ 06507/06508 ಬೆಳಗಾವಿ-ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06507 ಬೆಳಗಾವಿ -ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18, 2025 ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 19:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06508, ಅಕ್ಟೋಬರ್ 18, 2025 ರಂದು 21:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 19, 2025 ರಂದು 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ: 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.