ಹೋಳಿ ಹಬ್ಬದ ಪ್ರಯುಕ್ತ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

Charging points in trains to be switched off at night Strict directive from the Railway Department

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 13 ಮತ್ತು 14 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿರುವ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು 06520 ಕಲಬುರಗಿಯಿಂದ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ ಅದೇ ದಿನ ರಾತ್ರಿ 8 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲಿನಲ್ಲಿ 02 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 5 ಎಸಿ ತ್ರಿ ಟೈಯರ್, 02 ಎಸಿ ಟು ಟೈಯರ್ ಮತ್ತು 2 ಎಸ್ಎಲ್ಆರ್ ಡಿ ಸೇರಿದಂತೆ 21 ಬೋಗಿಗಳು ಇರಲಿವೆ.

ಪ್ರಯಾಣಿಕರು ಅಧಿಕೃತ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬಹುದು.