ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
-ರೈಲು ಸಂಖ್ಯೆ 07317/07318 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ (ಒಂದು ಟ್ರಿಪ್):
ರೈಲು ಸಂಖ್ಯೆ 07317 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ ವಿಶೇಷ ಎಕ್ಸ್ ಪ್ರೆಸ್ ರೈಲು 17.10.2025 ರಂದು ರಾತ್ರಿ 11:25ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 02:55ಕ್ಕೆ ವಾಸ್ಕೊ-ಡ-ಗಾಮ ತಲುಪಲಿದೆ. ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07318 ವಾಸ್ಕೊ-ಡ-ಗಾಮ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು 18.10.2025 ರಂದು ಸಂಜೆ 05:00ಕ್ಕೆ ವಾಸ್ಕೊ-ಡ-ಗಾಮದಿಂದ ಹೊರಟು, ಮರುದಿನ ಬೆಳಿಗ್ಗೆ 08:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ರೈಲು ಸಂಖ್ಯೆ 07317 ಮಾರ್ಗಮಧ್ಯೆ ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸ್ಯಾನ್’ವೊರ್ಡೆಮ್, ಮತ್ತು ಮಡಗಾಂವ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಅದೇ ರೀತಿ, ರೈಲು ಸಂಖ್ಯೆ 07318 ಸಹ ಬೆಂಗಳೂರು ಕಂಟೋನ್ಮೆಂಟ್’ನತ್ತ ಹಿಮ್ಮುಖ ದಿಕ್ಕಿನಲ್ಲಿ ಇದೇ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ರೈಲು ಒಟ್ಟು 22 ಬೋಗಿಗಳ ಸಂಯೋಜನೆಯನ್ನು ಹೊಂದಿದ್ದು, ಅದರಲ್ಲಿ 13 ಎಸಿ 3-ಟೈರ್, 7 ಸ್ಲೀಪರ್ ದರ್ಜೆ ಮತ್ತು 2 ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.


