1 ಲಕ್ಷ ಲಂಚ ಸ್ವೀಕಾರದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ರಾಜ್ಯ ಮಾಹಿತಿ ಆಯುಕ್ತ ರವೀಂದ್ರ

ಬೆಂಗಳೂರು: 1 ಲಕ್ಷ ರೂಪಾಯಿ ಲಂಚವನ್ನು ಯುಪಿಐ ಮೂಲಕ ಪಡೆಯುತ್ತಿದ್ದಂತ ವೇಳೆಯಲ್ಲೇ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತ ರವೀಂದ್ರ ಗುರುನಾಥ ಢಕಣಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಂದು ವ್ಯಕ್ತಿಯೊಬ್ಬರಿಂದ ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ ಢಕರಣಪ್ಪ ಅವರು 1 ಲಕ್ಷ ರೂಪಾಯಿಯನ್ನು ಯುಪಿಐ ಮೂಲಕ ಲಂಚವಾಗಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಈ ದಾಳಿಯ ವೇಳೆಯಲ್ಲಿ ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಅವರನ್ನು ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ರೆಡ್ ಹ್ಯಾಂಡ್ ಆಗಿ ಹಿಡಿದು, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.