ಮೈಸೂರಿನ ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟ ಕೇಸ್: ಪೋಸ್ಟ್ ಹಾಕಿದ್ದ ಆರೋಪಿ ಪೊಲೀಸ್ ಕಸ್ಟಡಿಗೆ

ಮೈಸೂರು: ಉದಯಗಿರಿ ಠಾಣೆಯ ಮೇಲೆ ಕಲ್ಲು ತೂರಾಟಕ್ಕೆ ಕಾರಣವಾಗುವಂತ ಪೋಸ್ಟ್ ಹಾಕಿದ್ದಂತ ಆರೋಪಿಯನ್ನು ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಮೈಸೂರಿನ ಉದಯಗಿರಿ ಠಾಣೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಲಾಗಿತ್ತು. ಈ ಸಂಬಂಧ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.

ಇನ್ನೂ ಈ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಂತ ಆರೋಪಿ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇಂದು ಮೈಸೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರಿದ ಕಾರಣ ಒಂದು ದಿನ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.