‘ಫೆಂಗಲ್’ ಬೆನ್ನಲ್ಲೇ ಮತ್ತೊಂದು ಆಘಾತ; ಭಾರೀ ಮಳೆ ಹಿನ್ನೆಲೆ ತಮಿಳುನಾಡಿನ ಶಾಲೆಗಳಿಗೆ ರಜೆ

ಚೆನ್ನೈ: ‘ಫೆಂಗಲ್’ ಬೆನ್ನಲ್ಲೇ ​ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಭಾರೀ ಮಳೆಯ ಆತಂಕ ಎದುರಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಸುತ್ತಮುತ್ತಲ ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದಲೇ ಭಾರೀ ಮಳೆಯಾಗುತ್ತಿದೆ. ಈ ಮಳೆ ಅವಾಂತರಗಳ ಕಾರಣದಿಂದಾಗಿ ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆ ಘೋಷಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲೂ ತುಂತುರು ಮಳೆ:

ಬೆಂಗಳೂರಿನಲ್ಲೂ ತುಂತುರು ಮಳೆಯಾಗುತ್ತಿದೆ. ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.