ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ

ಬೆಂಗಳೂರು: ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ/ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

ರೈಲುಗಳ ಭಾಗಶಃ ರದ್ದು:

1. ಜನವರಿ 25 ಮತ್ತು ಫೆಬ್ರವರಿ 1, 2025 ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ.

ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ:

1. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16213 ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

2. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 56906 ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ.

3. ಜನವರಿ 25 ಮತ್ತು ಫೆಬ್ರವರಿ 1 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. ಮತ್ತು ಈ ರೈಲು ಮಾರ್ಗ ಮಧ್ಯ 60 ನಿಮಿಷ ನಿಯಂತ್ರಣವಾಗಲಿದೆ.