ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳು ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ್ದಂತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತಂತೆ ನಟಿ ರಮ್ಯಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಪ್ಪು ಮಾಡಿದವರು ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಪೊಲೀಸರು ತೋರಿಸಿಕೊಟ್ಟಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ತಂದವರನ್ನು ಬಂಧಿಸುವಂತ ಕೆಲಸ ಮಾಡಿದ್ದಾರೆ. ಇಂತಹ ಕಾರ್ಯ ಮಾಡಿದಂತ ಪೊಲೀಸರ ಕೆಲಸವನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.