ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಆಟೋ ಒಂದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಹಿಂಡಿಗನಾಳ ಗ್ರಾಮದ ಬಳಿಯಲ್ಲಿ ಹೊಸಕೋಟೆಯಿಂದ ಚಿಂತಾಮಣಿ ಕಡೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಆಟೋಗೆ ಡಿಕ್ಕಿಯಾಗಿದೆ. ಇದರಿಂದಾಗಿ ಆಟೋದಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೂ ಆಟೋದಲ್ಲಿದ್ದಂತ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




