ರಾಜ್ಯದಲ್ಲಿಂದು ಕೊರೋನಾಗೆ ಇಬ್ಬರು ಬಲಿ, 57 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ 57 ಜನರಿಗೆ ಸೋಂಕು ದೃಢಪಟ್ಟಿದ್ದರೇ, 133 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, 542 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಕಳೆದ 24 ಗಂಟೆಯಲ್ಲಿ ಒಳಪಡಿಸಲಾಗಿತ್ತು. ಇವರಲ್ಲಿ 57 ಜನರಿಗೆ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದಿದೆ.

ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬಳ್ಳಾರಿಯಲ್ಲಿ 46 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದರೇ, ಬೆಳಗಾವಿಯಲ್ಲಿ 78 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.