ಬೆಂಗಳೂರಲ್ಲಿ ನಾಲ್ವರು ಯುವಕರಿಂದ ಮಹಿಳೆ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ನಗರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆಸಲಾಗಿದೆ. ಪರಿಚಯಸ್ಥ ಮಹಿಳೆಯ ಮೇಲೆ ನಾಲ್ವರು ಯುವಕರಿಂದ ಗ್ಯಾಂಗ್ ರೇಪ್ ಮಾಡಲಾಗಿದೆ.

ಬೆಂಗಳೂರಿನ ಕೋರಮಂಗಲದಲ್ಲಿ ಈ ಪೈಶಾಚಿಕ ಕೃತ್ಯ ಎಸಗಲಾಗಿದೆ. ಕೋರಮಂಗಲದ ಜ್ಯೋತಿ ನಿವಾಸ್ ಜಂಕ್ಷನ್ ಬಳಿಯಲ್ಲಿನ ಖಾಸಗಿ ಹೋಟೆಲ್ ಟೆರೆಸ್ ಮೇಲೆ ಕಾಮುಕರು ಪರಿಚಯಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಈ ಕುರಿತು ಸಂತ್ರಸ್ತ ಮಹಿಳೆ ಮುಂಜಾನೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಕೋರಮಂಗಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ, ಸ್ಥಳ ಪರಿಶೀಲನೆ ನಡೆಸಿ, ಕೃತ್ಯ ನಡೆಸಿದಂತ ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇನ್ನೂ ಸಂತ್ರಸ್ತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿನ ಕೆ ಆರ್ ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದಂತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಇದೀಗ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಂಗಳೂರಲ್ಲಿ ನಡೆದಿದೆ.